ಜೈಪುರ(ಜ:೦೨): “ಮೊದಲು ನನ್ನ ಜಾತಿಗಾಗಿ ಕೆಲಸ ಮಾಡುತ್ತೇನೆ” ಎಂದು ಹೇಳುವ ಮೂಲಕ ರಾಜಸ್ತಾನದ ನೂತನ ಸಚಿವೆ ಮಮತಾ ಭೂಪೇಶ್ ವಿವಾದಕ್ಕೆ ಗುರಿಯಾಗಿದ್ದಾರೆ.
ಸಮಾರಂಭವೊಂದರಲ್ಲಿ ಮಾತನಾಡಿದ ಅವರು ಈ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ.
ಪರಿಶಿಷ್ಟ ಜಾತಿಯ ‘ಬೆರ್ವಾ’ ಸಮುದಾಯಕ್ಕೆ ಸೇರಿದ ಮಮತಾ ಅವರು ತಮ್ಮ ಹೇಳಿಕೆ ವಿವಾದಕ್ಕೆ ಎಡೆಮಾಡಿಕೊಡುತ್ತಿದ್ದಂತೆ ಸ್ಪಷ್ಟನೆ ನೀಡಿ “ಎಲ್ಲರ ಅಭಿವೃದ್ಧಿಗೂ ಶ್ರಮಿಸುತ್ತೇನೆ” ಎಂದು ಹೇಳುವುದು ತಮ್ಮ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ.