ಮೆಲ್ಬೋರ್ನ್(ಡಿ:೨೮): ಟೆಸ್ಟ್ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದ ವರ್ಷದಲ್ಲಿ ಅತಿ ಹೆಚ್ಚು ವಿಕೆಟ್ ಕಬಳಿಸಿರುವ ಬುಮ್ರಾ ೩೯ ವರ್ಷಗಳ ಹಿಂದಿನ ದಾಖಲೆಯನ್ನು ಮುರಿದಿದ್ದಾರೆ.
ಪಂದ್ಯದಿಂದ ಪಂದ್ಯಕ್ಕೆ ತಮ್ಮ ಬೌಲಿಂಗ್ ನಲ್ಲಿ ಸುಧಾರಣೆ ತರುತ್ತಲೇ ಇರುವ ಬುಮ್ರಾ ಇದೀಗ ಇನ್ನೊಂದು ದಾಖಲೆ ಬರೆದಿದ್ದಾರೆ .
ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ತೃತೀಯ ಟೆಸ್ಟ್ ಪಂದ್ಯದಲ್ಲಿ ಬುಮ್ರಾ ಈ ಮೈಲುಗಲ್ಲನ್ನು ತಲುಪಿದ್ದಾರೆ.
೨೦೧೮ ಜನವರಿಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಟೆಸ್ಟ್ ಪಂದ್ಯದ ಮೂಲಕ ಬುಮ್ರಾ ಟೆಸ್ಟ್ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದರು. ಅಲ್ಲಿಂದ ಇಲ್ಲಿಯವರೆಗೆ ಒಟ್ಟು ೪೧ ವಿಕೆಟ್ ಗಳನ್ನು ಕಬಳಿಸಿದ್ದಾರೆ .
ವರ್ಷಾಂತ್ಯದಲ್ಲಿ ಮೆಲ್ಬೋರ್ನ್ ನಲ್ಲಿ ನಡೆಯುತ್ತಿರುವ ಪಂದ್ಯದಲ್ಲೂ ಸಹ ಬುಮ್ರಾ ಪ್ರಭಾವಿ ಬೌಲಿಂಗ್ ಪ್ರದರ್ಶಿಸಿದ್ದಾರೆ .