ಬೆಂಗಳೂರು(ಆ:31): ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆಯಲಿದ್ದು, ಅಧ್ಯಕ್ಷಗಾದಿಯ ಪ್ರಬಲ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ಹೆಚ್.ಡಿ. ರೇವಣ್ಣ ನಾಮಪತ್ರ ಸಲ್ಲಿಸದಿರಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಮೈತ್ರಿ ಸರ್ಕಾರದ ಪತನದ ನಂತರ ರೇವಣ್ಣ ಕೆಎಂಎಫ್ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದರು ಆದರೆ, ಕಾಂಗ್ರೆಸ್ ನಿಂದ ಭೀಮಾ ನಾಯಕ್ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ನಿರ್ಧರಿಸಿದ್ದರಿಂದ ಮೈತ್ರಿ ಪಕ್ಷಗಳ ನಾಯಕರಲ್ಲಿ ಇದೇ ವಿಷಯಕ್ಕಾಗಿ ಕಿತ್ತಾಟ ಶುರುವಾಗಿತ್ತು.

ಇಂದು ನಡೆಯುವ ಕೆಎಂಎಫ್ ಚುನಾವಣೆಯಲ್ಲಿ ಬಿಜೆಪಿಯಿಂದ ಬಾಲಚಂದ್ರ ಜಾರಕಿಹೊಳಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲು ನಿರ್ಧರಿಸಿರುವುದರಿಂದ ಹೆಚ್.ಡಿ. ರೇವಣ್ಣ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ ಎನ್ನಲಾಗಿದೆ.