ಔಕ್ಲ್ಯಾಂಡ್(ಫೆ:೦೮):ರೋಹಿತ್ ಶರ್ಮಾ ತಮ್ಮ ಕ್ರಿಕೆಟ್ ಜೀವನದಲ್ಲಿ ಮತ್ತೊಂದು ಸಾಧನೆಯನ್ನು ಮಾಡಿದ್ದಾರೆ.ನ್ಯೂಜಿಲೆಂಡ್ ನ ಎರಡನೇ ಟಿ20 ಪಂದ್ಯದಲ್ಲಿ ಅವರು ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾಗಿ ಹೊರಹೊಮ್ಮಿದ್ದಾರೆ.

ಇದುವರೆಗೂ ನ್ಯೂಜಿಲೆಂಡ್ ನ ಮಾರ್ಟಿನ್ ಗುಪ್ಪಿಲ್ 74 ಪಂದ್ಯಗಳಿಂದ 2272 ರನ್ ಗಳಿಸಿ ಮೊದಲ ಸ್ಥಾನದಲ್ಲಿದ್ದರು.ಈಗ ಭಾರತೀಯ ಆಟಗಾರ ರೋಹಿತ್ ಶರ್ಮಾ 84 ಪಂದ್ಯಗಳಿಂದ 2288 ರನ್ ಗಳಿಸಿ ಟಿ 20 ಪಂದ್ಯದಲ್ಲಿ ಅತಿ ಹೆಚ್ಚು ರನ್ ಗಳಿಸಿದ ವಿಶ್ವದ ಅಗ್ರಮಾನ್ಯ ಆಟಗಾರ ಎನಿಸಿಕೊಂಡಿದ್ದಾರೆ.

ಪಾಕಿಸ್ತಾಬದ ಶೋಯೆಬ್ ಮಲ್ಲಿಕ್ 104 ಪಂದ್ಯಗಳಿಂದ 2263 ರನ್ ಗಳಿಸಿದ್ದರೆ, ಭಾರತದ ನಾಯಕ ವಿರಾಟ್ ಕೊಹ್ಲಿ 60 ಪಂದ್ಯಗಳಿಂದ 2167 ರನ್ ಗಳಿಸಿ ನಂತರದ ಸ್ಥಾನದಲ್ಲಿದ್ದಾರೆ.