ರಾಯಚೂರು(ಜೂನ್.07) ರಾಯಚೂರು ಜಿಲ್ಲೆಯಲ್ಲಿ ಕಳೆದ ಎರಡು ದಿನದಿಂದ ಸುರಿದ ಭಾರೀ ಮಳೆಗೆ ಕೊತ್ತದೊಡ್ಡಿ ಗ್ರಾಮದಲ್ಲಿ ಮನೆಯ ಮೇಲ್ಚಾವಣಿ ಕುಸಿದು ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿದ್ದಾರೆ.

ಮೃತರನ್ನು ಗೋವಿಂದಮ್ಮ (63), ಶಿವಾನಿ (3), ಮೂರು ತಿಂಗಳ ಹಸುಗೂಸು ಎಂದು ಗುರುತಿಸಲಾಗಿದೆ. ಕಳೆದ ಎರಡು ದಿನಗಳಿಂದ ಸುರಿದ ಮಳೆಯಿಂದಾಗಿ ಹಲವೆಡೆ ಮರಗಳು, ವಿದ್ಯುತ್ ಕಂಬಗಳು ಉರುಳಿ ಬಿದ್ದಿವೆ ಎನ್ನಲಾಗಿದೆ. ಕಳೆದ ರಾತ್ರಿ ಕೊತ್ತದೊಡ್ಡಿ ಗ್ರಾಮದಲ್ಲಿ ಭಾರೀ ಪ್ರಮಾಣದ ಮಳೆ ಸುರಿದಿದೆ, ಆದ್ದರಿಂದ ಇಂದು ಬೆಳಿಗ್ಗೆ ಮಲಗಿದ್ದವರ ಮೇಲೆ ಮನೆಯ ಮೇಲ್ಚಾವಣಿ ಕುಸಿದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ತಾಲ್ಲೂಕು ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರದಲ್ಲಿ ಅವಶೇಷಗಳಡಿ ಸಿಲುಕದ್ದ ಮೂವರನ್ನು ಮೇಲೆತ್ತಿ ಮರಣೋತ್ತರ ಪರೀಕ್ಷೆಗೆ ತಾಲ್ಲೂಕು ಆಸ್ಪತ್ರೆಗೆ ರವಾನಿಸಲಾಯಿತು. ಭಾರೀ ಮಳೆಯ ಹಿನ್ನೆಲೆಯಲ್ಲಿ ಹಳೆಯ ಮನೆ ಇದ್ದವರು ಮುನ್ನೆಚ್ಚರಿಕೆವಹಿಸುವಂತೆ ಸೂಚನೆ ನೀಡಲಾಯಿತು.