ಬೆಂಗಳೂರು(ಜುಲೈ.16) ಐಎಂಎ ಜ್ಯೂವೆಲರ್ಸ್ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ವಿಶೇಷ ತನಿಖಾ ದಳದ ಬಂಧನಕ್ಕೆ ಕಾಂಗ್ರೆಸ್ ಶಾಸಕ ರೋಶನ್ ಬೇಗ್ ಒಳಗಾಗಿದ್ದು, ಹೈಕೋರ್ಟ್ ಮೊರೆ ಹೋಗಿದ್ದಾರೆ.

ಹೂಡಿಕೆದಾರರಿಗೆ ಬಹುಕೋಟಿ ವಂಚನೆ ಮಾಡಿದ ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ರೋಷನ್ ಬೇಗ್ ರನ್ನು ತೀವ್ರ ವಿಚಾರಣೆಗೊಳಪಡಿಸಿದ್ದಾರೆ. ತಮ್ಮ ಕಕ್ಷಿದಾರರ ಬಂಧನ ಪ್ರಶ್ನಿಸಿ ರೋಶನ್ ಬೇಗ್ ಪರ ವಕೀಲ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಎಸ್‍ಐಟಿ ಅಧಿಕಾರಿಗಳು ರೋಷನ್ ಬೇಗ್ ಅವರನ್ನು ನಿನ್ನೆ ವಶಕ್ಕೆ ಪಡೆದಿದ್ದು, ವಿಮಾನ ನಿಲ್ದಾಣದಲ್ಲೇ ಹಿರಿಯ ಅಧಿಕಾರಿಗಳಿಂದ ಅವರ ವಿಚಾರಣೆ ನಡೆಸಲಾಗಿದೆ. ಅದರಂತೆಯೇ ರೋಷನ್ ಬೇಗ್ ಮುಂಬೈಗೆ ತೆರಳಲು ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದರು ಎಂಬ ಮಾಹಿತಿ ಎಸ್‍ಐಟಿ ಅಧಿಕಾರಿಗಳಿಗೆ ಲಭಿಸಿದ್ದು, ಇದೇ ಕಾರಣಕ್ಕಾಗಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.