ದೆಹಲಿ(ನ.18) ಸುಪ್ರೀಂ ಕೋರ್ಟ್ ನ 47ನೇ ಮುಖ್ಯ ನ್ಯಾಯಮೂರ್ತಿಗಳಾಗಿ ನ್ಯಾಯಮೂರ್ತಿ ಶರದ್ ಅರವಿಂದ್ ಬೊಬ್ಡೆ ಅವರು ಪ್ರಮಾಣವಚನ ಸ್ವೀಕರಿಸಿದರು.

ರಾಷ್ಟ್ರಪತಿ ರಾಮನಾಥ್ ಕೋವಿಂದ್ ನ್ಯಾಯಮೂರ್ತಿ ಬೊಬ್ಡೆ ಅವರಿಗೆ ಪ್ರಮಾಣವಚನ ಬೋಧಿಸಿದ್ದಾರೆ. ಬೊಬ್ಡೆ ಅವರು ಇನ್ನು 18 ತಿಂಗಳುಗಳ ಕಾಲ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಲಿದ್ದು, 2021ರ ಏಪ್ರಿಲ್ 23ಕ್ಕೆ ನಿವೃತ್ತಿ ಹೊಂದಲಿದ್ದಾರೆ.

ಕಳೆದ ಶನಿವಾರವಷ್ಟೇ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿದ್ದ ರಂಜನ್ ಗೊಗೊಯ್ ಅವರು ತಮ್ಮ ಸೇವಾವಧಿ ಅಂತ್ಯಗೊಳಿಸಿದ್ದಾರೆ. ಅವರಿಗೆ ಇತರೆ ನ್ಯಾಯಮೂರ್ತಿಗಳು, ಅಧಿಕಾರಿಗಳು, ವಕೀಲರ ತಂಡ ಹೃದಯ ಸ್ಪರ್ಶಿ ಬೀಳ್ಕೊಡುಗೆ ಕೊಟ್ಟಿದ್ದಾರೆ. ಗೊಗೊಯ್ ಅವರ ಸೇವಾವಧಿ ಮುಕ್ತಾಯಗೊಂಡ ಬೆನ್ನಲ್ಲೇ, ಶರದ್ ಅರವಿಂದ್ ಅವರು ಅಧಿಕಾರ ಸ್ವೀಕರಿಸಿದ್ದಾರೆ.