ಬೆಂಗಳೂರು(ಅ.03) ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷಾ ತಾತ್ಕಾಲಿಕ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯು ಅಧಿಕೃತವಾಗಿ ಪ್ರಕಟಣೆಯನ್ನು ಮಾಡಿದೆ.

ದ್ವಿತೀಯ ಪಿಯುಸಿ ತಾತ್ಕಾಲಿಕ ವೇಳಾಪಟ್ಟಿ ಕೆಳಕಂಡಂತಿದೆ.
ಮಾರ್ಚ್ 4 – ಇತಿಹಾಸ, ಭೌತಶಾಸ್ತ್ರ, ಬೇಸಿಕ್ ಗಣಿತ
ಮಾರ್ಚ್ 5 – ತಮಿಳು, ತೆಲುಗು, ಮಲೆಯಾಳಂ, ಮರಾಠಿ, ಅರೇಬಿಕ್, ಫ್ರೆಂಚ್
ಮಾರ್ಚ್ 6 – ಉರ್ದು, ಸಂಸ್ಕೃತ
ಮಾರ್ಚ್ 7 – ತರ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಶಿಕ್ಷಣ, ಗೃಹ ವಿಜ್ಞಾನ

ಮಾರ್ಚ್ 9 – ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಗಣಿತ
ಮಾರ್ಚ್ 10 – ಎನ್.ಎಸ್.ಕ್ಯೂ.ಎಫ್(NSQF)
ಮಾರ್ಚ್ 11 – ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ

ಮಾರ್ಚ್ 12 – ವ್ಯವಹಾರ ಅಧ್ಯಯನ, ಸಮಾಜಶಾಸ್ತ್ರ, ರಸಾಯನಶಾಸ್ತ್ರ
ಮಾರ್ಚ್ 13 – ಭೂಗೋಳಶಾಸ್ತ್ರ, ಕರ್ನಾಟಿಕ್ ಸಂಗೀತ, ಹಿಂದೂಸ್ಥಾನಿ ಸಂಗೀತ
ಮಾರ್ಚ್ 14 – ಮನಃಶಾಸ್ತ್ರ, ಎಲೆಕ್ಟ್ರಾನಿಕ್ಸ್, ಗಣಕ ವಿಜ್ಞಾನ
ಮಾರ್ಚ್ 16 – ಅರ್ಥಶಾಸ್ತ್ರ, ಜೀವಶಾಸ್ತ್ರ

ಮಾರ್ಚ್ 17 – ಹಿಂದಿ
ಮಾರ್ಚ್ 18 – ಕನ್ನಡ
ಮಾರ್ಚ್ 19 – ಇಂಗ್ಲಿಷ್

ಯಾವುದಾದರೂ ಆಕ್ಷೇಪಣೆ ಇದ್ದರೆ ಅಕ್ಟೋಬರ್ 31ರ ಒಳಗಾಗಿ ಆಕ್ಷೇಪವನ್ನು ಸಲ್ಲಿಸಲು ಅವಕಾಶ ಮಾಡಿಕೊಟ್ಟಿದೆ.