ಬೆಂಗಳೂರು(ಜುಲೈ.24) ರಾಜ್ಯ ರಾಜಕೀಯದಲ್ಲಿ ಹೈಡ್ರಾಮಾ ಕೊನೆಗೊಂಡಿದ್ದು ಸಿಎಂ ಕುಮಾರಸ್ವಾಮಿ ವಿಶ್ವಾಸ ಮತಯಾಚನೆ ಮಾಡುವಲ್ಲಿ ವಿಫಲಗೊಂಡಿದ್ದು ಕುಮಾರಸ್ವಾಮಿಯವರ ಸಮ್ಮಿಶ್ರ ಸರ್ಕಾರ ಪತನಗೊಂಡಿದ್ದು, ಬೆಂಗಳೂರು ನಗರದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಬೆಂಗಳೂರು ನಗರ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, 25ನೇ ತಾರೀಖಿನವರೆಗೂ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.

ಸಂಜೆ ಬಾರ್ ಮತ್ತು ಕ್ಲಬ್ ಗಳನ್ನು ಸಹ ಬಂದ್ ಮಾಡಲಾಗುತ್ತಿದ್ದು, ಪ್ರತಿಭಟನೆ, ಧರಣಿ, ಕಲ್ಲು ತೂರಾಟ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅಲೋಕ್ ಕುಮಾರ್ ಅವರು ಹೇಳಿದರು.

ಈಗಾಗಲೇ ನಗರದಾದ್ಯಂತ ಪೊಲೀಸ್ ವಾಹನಗಳಲ್ಲಿ ಪ್ರಕಟಣೆಗಳನ್ನು ಹೊರಡಿಸಲಾಗುತ್ತಿದೆ. ನಿಷೇಧಾಜ್ಞೆ ಅನ್ವಯ ಎರಡಕ್ಕಿಂತಲೂ ಹೆಚ್ಚು ಜನ ಒಟ್ಟು ಸೇರುವುದನ್ನು ನಿಷೇಧಿಸಲಾಗಿದೆ.

ಸರ್ಕಾರ ಪತನಗೊಂಡಿದ್ದು, ಸಿಎಂ ಕುಮಾರಸ್ವಾಮಿಯವರು ತಮ್ಮ ರಾಜೀನಾಮೆಯನ್ನು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.