ಶಿವಮೊಗ್ಗ(ಜೂನ್.03) ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಪುರಸಭೆಯ 23 ವಾರ್ಡ್‍ಗಳಿಗೆ ನಡೆಸಿದ್ದ ಚುನಾವಣೆಯಲ್ಲಿ ಬಿ.ಎಸ್.ಯಡಿಯೂರಪ್ಪನವರಿಗೆ ಹಿನ್ನಡೆಯಾಗಿದೆ.

ಶಿಕಾರಿಪುರದ 23 ವಾರ್ಡ್‍ಗಳ ಪೈಕಿ ಬಿಜೆಪಿ 8 ಸ್ಥಾನಗಳಲ್ಲಿ ಜಯಗಳಿಸಿದರೆ, ಕಾಂಗ್ರೆಸ್ 12 ಸ್ಥಾನಗಳನ್ನು ಗೆದ್ದಿದೆ. ಇನ್ನು ಪಕ್ಷೇತರವಾಗಿ 3 ಅಭ್ಯರ್ಥಿಗಳು ಜಯಗಳಿಸಿದ್ದಾರೆ.

ಆದರೂ ಶಿಕಾರಿಪುರದ ಪುರಸಭೆಯಲ್ಲಿ ಬಿಜೆಪಿಗೆ ಅಧಿಕಾರದ ಅವಕಾಶ ಜಾಸ್ತಿ ಇದೆ. ಮೂವರು ಪಕ್ಷೇತರರಲ್ಲಿ ಇಬ್ಬರು ಬಿಜೆಪಿಯ ಬಂಡಾಯ ಅಭ್ಯರ್ಥಿಗಳಿದ್ದಾರೆ.
ಮೂವರು ಪಕ್ಷೇತರರ ಬೆಂಬಲದೊಂದಿಗೆ ಅಧಿಕಾರವನ್ನು ಹಿಡಿಯಲು ಬಿಜೆಪಿ ಕಸರತ್ತನ್ನು ನಡೆಸಿದೆ. ಶಾಸಕರು, ಸಂಸದರ ಮತದಿಂದ ಬಿಜೆಪಿಯು ಅಧಿಕಾರ ಹಿಡಿಯಬಹುದು.