ನವದೆಹಲಿ(ಫೆ.18): ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರ ಪೈಶಾಚಿಕ ಕೃತ್ಯದಿಂದ ಪ್ರಾಣ ತ್ಯಾಗ ಮಾಡಿದ ಭಾರತೀಯ ಯೋಧರ ಕುಟುಂಬಗಳಿಗೆ ಶಿಖರ್ ಧವನ್ ನೆರವಿನ ಹಸ್ತ ಚಾಚಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಸಂದೇಶ ನೀಡಿರುವ ಧವನ್ ತಾವು ಯೋಧರ ಕುಟುಂಬಕ್ಕೆ ಹಣಕಾಸಿನ ನೆರವು ನೀಡುವ ವಿಚಾರವನ್ನು ತಿಳಿಸಿದ್ದು, ಇತರರೂ ಈ ರೀತಿ ನೆರವಾಗಿ ಎಂದು ಕರೆ ನೀಡಿದ್ದಾರೆ.

ತಮ್ಮ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಸಂದೇಶ ನೀಡಿರುವ ಧವನ್ ತಾವು ಯೋಧರ ಕುಟುಂಬಕ್ಕೆ ಹಣಕಾಸಿನ ನೆರವು ನೀಡುವ ವಿಚಾರವನ್ನು ತಿಳಿಸಿದ್ದಾರಲ್ಲದೇ ಇತರರೂ ಈ ರೀತಿ ನೆರವಾಗಿ ಎಂದು ಕರೆ ನೀಡಿದ್ದಾರೆ.

ಇನ್ನು, ಪುಲ್ವಾಮಾದಲ್ಲಿ ಹುತಾತ್ಮರಾದ ಯೋಧರ ಕುಟುಂಬಗಳಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಬಿಸಿಸಿಐ 5 ಕೋಟಿ ರೂ. ನೆರವು ನೀಡುತ್ತಿದೆ. ಇದಕ್ಕೂ ಮೊದಲು ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಹುತಾತ್ಮ ಯೋಧರ ವಿದ್ಯಾಭ್ಯಾಸದ ಖರ್ಚು ಭರಿಸುವುದಾಗಿ ಹೇಳಿದ್ದರು. ಇದೀಗ ಶಿಖರ್ ಧವನ್ ಹುತಾತ್ಮ ಯೋಧರಿಗೆ ಹಣಕಾಸಿನ ನೆರವು ನೀಡಲು ಮುಂದಾಗಿದ್ದಾರೆ.

ಜಮ್ಮು-ಕಾಶ್ಮೀರದ ಪುಲ್ವಾಮ ಜಿಲ್ಲೆಯ ಅವಂತಿಪೊರ ಪ್ರದೇಶದಲ್ಲಿ ಭಯೋತ್ಪಾದಕರು ಕಳೆದ ಗುರುವಾರ ಭೀಕರ ಬಾಂಬ್ ದಾಳಿ ನಡೆಸಿದ್ದರು. ಈ ವೇಳೆ ಮದ್ದೂರಿನ ಗುರು ಹೆಸರಿನ ಯೋಧ ಸೇರಿ 40 ಮಂದಿ ಸೈನಿಕರು ಹುತಾತ್ಮರಾಗಿದ್ದರು. 20 ವರ್ಷಗಳಲ್ಲಿ ನಡೆದ ದಾಳಿಗಳಲ್ಲಿ ಅತೀ ದೊಡ್ಡ ದಾಳಿ ಇದಾಗಿದೆ.