ಬೆಂಗಳೂರು(ಜೂನ್.12) ವಾಹನ ಸವಾರರಿಗೆ ರಾಜ್ಯ ಸರ್ಕಾರವು ಶಾಕಿಂಗ್ ನ್ಯೂಸ್ ನೀಡಿದೆ. ಕರ್ನಾಟಕ ರಾಜ್ಯದಲ್ಲಿ ಮುಂಬರುವ ದಿನಗಳಲ್ಲಿ 1.117 ಕಿ.ಮೀ ರಸ್ತೆಯನ್ನು ನಿರ್ಮಿಸಲು ಸರ್ಕಾರ ನಿರ್ಧಾರ ಕೈಗೊಂಡಿದೆ. ಈ ನಿರ್ಧಾರದಿಂದ ರಾಜ್ಯ ಸರ್ಕಾರ ಎಲ್ಲಾ ರಾಜ್ಯದ ಎಲ್ಲಾ ರಸ್ತೆಗಳಲ್ಲೂ ಬಳಕೆದಾರರಿಗೆ ಟೋಲ್ ಶುಲ್ಕ ವಿಧಿಸಲು ಮುಂದಾಗಿದೆ.

2011ರಲ್ಲಿ ಪ್ರಕಟವಾದ ಸರ್ಕಾರಿ ಆದೇಶದ ಮೇರೆಗೆ ರಾಜ್ಯ ಹೆದ್ದಾರಿಗಳಲ್ಲಿ ಬಳಕೆದಾರರಿಗೆ ಶುಲ್ಕ ವಿಧಿಸಲು ಮುಂದಾಗಿದೆ. ರಾಜ್ಯ ಹೆದ್ದಾರಿ ಪ್ರಾಧಿಕಾರ, ಕೆ-ಶಿಪ್ ಮತ್ತು ರಸ್ತೆ ಅಭಿವೃದ್ಧಿ ನಿಗಮದಿಂದ 25,800 ಕೋಟಿ ರೂಪಾಯಿ ವೆಚ್ಚದಲ್ಲಿ ರಸ್ತೆಗಳ ನಿರ್ಮಾಣ ಮಾಡಲಿದೆ.

ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಇಲಾಖೆ ಪ್ರಗತಿ ಪರಿಶೀಲನೆ ಸಭೆ ಬಳಿಕ ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಈ ಮಾಹಿತಿಯನ್ನು ನೀಡಿದ್ದಾರೆ.

37 ಸಾವಿರ ಕೋಟಿ ರೂ. ವೆಚ್ಚದಲ್ಲಿ 3,600 ಕಿ.ಮೀ ರಸ್ತೆ ನಿರ್ಮಾಣಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಒಪ್ಪಿಗೆ ನೀಡಿದೆ. ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ.