ತುಮಕೂರು(ಜ:17): ಸಿದ್ದಗಂಗಾ ಶಿವಕುಮಾರ ಶ್ರೀಗಳ ಅನಾರೋಗ್ಯದ ಹಿನ್ನೆಲೆಯಲ್ಲಿ ಗುರುವಾರ ಶ್ರೀಗಳನ್ನು ಭೇಟಿ ಮಾಡಿದ ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್,ಶ್ರೀಗಳ ಆರೋಗ್ಯ ಸ್ಥಿರವಾಗಿದೆ,ಆತಂಕ ಪಡುವ ಅವಶ್ಯಕತೆ ಇಲ್ಲ ಭಕ್ತಾದಿಗಳು ಸಹಕರಿಸಬೇಕೆಂದು ಮನವಿ ಮಾಡಿದ್ದಾರೆ.

ಶ್ರೀಗಳ ಆರೋಗ್ಯ ವಿಚಾರಿಸಿದ ನಂತರ ,ಮಾತನಾಡಿದ ಅವರು ಶ್ರೀಗಳಿಗೆ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ,ನಿನ್ನೆ ರಾತ್ರಿ ಶ್ರೀಗಳು ಕಣ್ಣು ಬಿಟ್ಟಿದ್ದರು ಎಂದು ವೈದ್ಯರು ತಿಳಿಸಿದ್ದಾರೆ, ಶ್ರೀಗಳ ಆರೋಗ್ಯದ ಸ್ಥಿತಿ ಸುಧಾರಣೆಯಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸೋಣ ಎಂದರು.