ಬೆಂಗಳೂರು(ಜುಲೈ.26) ರಾಜ್ಯದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪನವರು ಶುಕ್ರವಾರ ಬೆಳಗ್ಗೆ ದಿಢೀರ್ ರಾಜ್ಯಪಾಲರನ್ನು ಭೇಟಿಯಾಗಿ ತಮಗೆ ಸರಕಾರದ ರಚಿಸಲು ಅವಕಾಶ ನೀಡಬೇಕೆಂದು ಹಕ್ಕು ಮಂಡಿಸಿದ್ದಾರೆ. ಇದಕ್ಕೆ ತಕ್ಷಣವೇ ಸ್ಪಂದಿಸಿರುವ ರಾಜ್ಯಪಾಲರು ಸಂಜೆ 6.15 ಗಂಟೆಗೆ ಪ್ರಮಾಣವಚನ ಸ್ವೀಕಾರಕ್ಕೆ ಸಮಯ ನಿಗದಿಪಡಿಸಿ ಪತ್ರ ನೀಡಿದ್ದಾರೆ. ಯಡಿಯೂರಪ್ಪನವರ ಈ ನಿರ್ಧಾರವನ್ನು ಕಂಡ ಸಿದ್ದರಾಮಯ್ಯನವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಟ್ವೀಟ್ ಮಾಡಿಕೊಂಡಿದ್ದಾರೆ.

ಬಹುಮತವಿಲ್ಲದಿದ್ದರೂ ಬಿಎಸ್ ಯಡಿಯೂರಪ್ಪ ಸಿಎಂ ಆಗಲು ಹೊರಟಿರುವುದು, ಅವರ ತರಾತುರಿಯ ನಿರ್ಧಾರವನ್ನು ರಾಜ್ಯಪಾಲರು ಒಪ್ಪಿರುವುದು ಎರಡೂ ಸಂಸದೀಯ ಪ್ರಜಾಪ್ರಭುತ್ವಕ್ಕೆ ಮಾರಕವಾಗಿರುವ ಬೆಳವಣಿಗೆಗಳು. ಸಂವಿಧಾನದ ಮೇಲೆ ಬಿಜೆಪಿಗೆ ನಂಬಿಕೆಯಿಲ್ಲ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ ಎಂದು ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.