ಬೆಂಗಳೂರು(ಆ:17): ಕಾಂಗ್ರೆಸ್ ಸರ್ಕಾರದಲ್ಲಿ ಜಾರಿಗೆ ತಂದಿದ್ದ ಜನಪರ ಯೋಜನೆಗಳನ್ನು ಬಿಜೆಪಿ ಸರ್ಕಾರ ರದ್ದು ಮಾಡುವ ದುರಾಲೋಚನೆ ಮಾಡಿದರೆ ಬಡಜನತೆ ದಂಗೆ ಏಳುತ್ತಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ನಮ್ಮ ಸರ್ಕಾರ ಜಾರಿಗೆ ತಂದಿದ್ದ ಜನಪರ ಯೋಜನೆಗಳನ್ನು ಈಗಿನ ಸರ್ಕಾರ ರದ್ದುಪಡಿಸುವ, ನಿರ್ಲಕ್ಷಿಸುವ ದುರಾಲೋಚನೆ ಮಾಡಿದರೆ ರಾಜ್ಯದ ಬಡ ಜನತೆ ದಂಗೆ ಏಳಬಹುದು, ಎಚ್ಚರ ಇರಲಿ, ಇಂತಹ ಜನವಿರೋಧಿ ನಿಲುವುಗಳನ್ನು ನಾವು ಸಹಿಸಿಕೊಳ್ಳುವವರಲ್ಲ, ಹೋರಾಟದ ಮೂಲಕ ಉತ್ತರ ನೀಡಬೇಕಾಗುತ್ತದೆ ಎಂದು ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಬರ ಪರಿಸ್ಥಿತಿ ಎದುರಿಸಿದ ಸಂದರ್ಭಗಳಲ್ಲಿ ವಾಜಪೇಯಿ ಸರ್ಕಾರವೂ ಸೇರಿದಂತೆ ಹಿಂದಿನ ಯಾವ ಕೇಂದ್ರ ಸರ್ಕಾರವೂ, ಯಾವ ಪ್ರಧಾನಿಯೂ ಕರ್ನಾಟಕ ರಾಜ್ಯವನ್ನು ಈ ರೀತಿ ನಿರ್ಲಕ್ಷಿಸಿಲ್ಲ. ಮುಖ್ಯಮಂತ್ರಿಗಳನ್ನು ಈ ರೀತಿ ಅವಮಾನಿಸಿಲ್ಲ. ಸ್ವಾಭಿಮಾನಿ, ಸ್ವಾವಲಂಬಿ ಕರ್ನಾಟಕ ಇದನ್ನು ಸಹಿಸದು ಎಂದು ಗರಂ ಆಗಿದ್ದಾರೆ.