ಗೋಕಾಕ್(ಡಿ.05) ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ 15 ಜನ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರಬಂದಿದ್ದು, ಕಾಂಗ್ರೆಸ್ ಪಕ್ಷದಿಂದ ಹೊರಬಂದ ಗೋಕಾಕ್ ಕ್ಷೇತ್ರದ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ.

ಇಂದು ರಾಜ್ಯದಲ್ಲಿ ಉಪಚುನಾವಣೆಯ ನಡೆಯುತ್ತಿದ್ದು ಈ ಹಿನ್ನೆಲೆಯಲ್ಲಿ ಗೋಕಾಕ್ ಕ್ಷೇತ್ರದಲ್ಲಿ ಮತದಾನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ, ಉಪಚುನಾವಣೆ ಮುಗಿದ ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿಗೆ ಬರುತ್ತಾರೆ ಎಂದು ಹೇಳಿದ್ದಾರೆ.

ಉಪಚುನಾವಣೆ ಮುಗಿದ ಮೇಲೆ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಬಿಜೆಪಿಗೆ ಕರೆದುಕೊಂಡು ಬರುತ್ತೇನೆ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.