ಕೊಪ್ಪಳ(ಜ:05): ವಿಷ ಸೇವಿಸಿ ಒಂದೇ ಕುಟುಂಬದ ಆರು ಮಂದಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಕೊಪ್ಪಳ ತಾಲೂಕಿನ ಮೆತಗಲ್ ಎಂಬ ಗ್ರಾಮದಲ್ಲಿ ನಡೆದಿದೆ.

ಶೇಖರಯ್ಯ,ಜಯಮ್ಮ,ಬಸಮ್ಮ,ಪಾರಮ್ಮ,ಗೌರಮ್ಮ,ಸಾವಿತ್ರಿ ಎಂಬುವರು ಮೃತ ದುರ್ದೈವಿಗಳು. ಈ ಆತ್ಮಹತ್ಯೆಗೆ ಸೂಕ್ತ ಕಾರಣ ಏನೆಂಬುದು ಇನ್ನೂ ತಿಳಿದುಬಂದಿಲ್ಲ,ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ಪೋಲಿಸರು ತನಿಖೆ ನಡೆಸುತ್ತಿದ್ದಾರೆ.