ನವದೆಹಲಿ(ನ.14): 2011-12 ರ ತೆರಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ 2011-12 ರ ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಅಂತಿಮ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಡಿಸೆಂಬರ್ 4ಕ್ಕೆ ಮೂಂದುಡಿದೆ.

ದೆಹಲಿ ಹೈ ಕೋರ್ಟ್ ಆದೇಶ ಪ್ರಶ್ನೀಸಿ ರಾಹುಲ್ ಗಾಂಧಿ ಹಾಗೂ ಸೋನಿಯಾ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್‍ನನ್ಯಾಯಾಮೂರ್ತಿಗಳಾದ ಎ.ಕೆ.ಸಿರ್ಕಿ ಮತ್ತು ಎಸ್.ಎ. ಅಬ್ದುಲ್ ನಜೀರ್ ನೇತೃತ್ವದ ನ್ಯಾಯ ಪೀಠ ಅಂತಿಮ ವಿಚಾರಣೆಯನ್ನು ಡಿಸೆಂಬರ್ 4ಕ್ಕೆ ನಿಗದಿ ಮಾಡಿದೆ.

ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದಂತೆ ತೆರಿಗೆ ಪ್ರಕರಣ ಇದಾಗಿದೆ