ಬೆಂಗಳೂರು:(ಜೂನ್06): ರಾಜ್ಯಾದ್ಯಂದ ಬರ ಪರಿಸ್ಥಿತಿ ಬಂದು ಕುಡಿಯುವ ನೀರಿಗೂ ತೊಂದರೆ ಉಂಟಾದ ಹಿನ್ನೆಲೆಯಲ್ಲಿ ಮಳೆರಾಯನ ಮರುವಿಕೆಗಾಗಿ ರಾಜ್ಯದ ಮುಜುರಾಯಿ ಇಲಾಖೆಯಡಿ ಬರುವ ದೇವಸ್ಥಾನಗಳಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

ಮಳೆಗಾಗಿ ಪೂಜೆ ಸಲ್ಲಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಇಂದು ದೇವಸ್ಥಾನದಲ್ಲಿ ವಿಶೇಷ ಪೊಜೆಯ ಜೊತೆಗೆ ಪ್ರಾರ್ಥನೆಯನ್ನು ನೆರವೇರಿಸಲಾಯಿತು.

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯ ಕಿಗ್ಗಾ ಗ್ರಾಮದಲ್ಲಿರುವ ಋಷ್ಯಶೃಂಗ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಸುವ ವೇಳೆ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಹಾಗೂ ಪಿ.ಟಿ ಪರಮೇಶ್ವರ್ ನಾಯ್ಕ್ ಭಾಗವಹಿಸಿದ್ದರು.

ಇನ್ನೂ ದೇವರಿಗೆ ಪರ್ಜನ್ಯ ಹೋಮ ನೆರವೇರಿಸುವ ಮೂಲಕ ರಾಜ್ಯದಲ್ಲಿ ಕಾಲಕಾಲಕ್ಕೆ ಬೆಳೆಯಾಗುವ ಮುಖೇನ ಸಂಮೃದ್ಧತೆ ಹೊರಹೊಮ್ಮಲಿ ಎಂದು ದೇವರಲ್ಲಿ ಪ್ರಾರ್ಥಿಸಲಾಗಿದೆ ಎಂದು ತಿಳಿದು ಬಂದಿದೆ.