ಬೆಂಗಳೂರು(ಜೂನ್.14) ರಾಜ್ಯ ಸಕಾರವು ಜಿಂದಾಲ್ ಕಂಪನಿಗೆ ಭೂಮಿ ಮಾಡುವುದನ್ನು ವಿರೋಧಿಸಿ ಇಂದು ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ.

ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಅಹೋರಾತ್ರಿ ಧರಣಿಯನ್ನು ಮಾಜಿ ಡಿಸಿಎಂ ಆರ್.ಅಶೋಕ್ ನೇತೃತ್ವದಲ್ಲಿ ಧರಣಿಯನ್ನು ನಡೆಸಲಾಗುತ್ತಿದೆ. ಬೆಂಗಳೂರಿನ ಆನಂದ್ ರಾವ್ ಸರ್ಕಲ್ ನ ಗಾಂಧಿ ಪ್ರತಿಮೆ ಬಳಿ ಜಿಂದಾಲ್ ಕಂಪನಿಗೆ ಭೂಮಿ ಮಾರಾಟಕ್ಕೆ ವಿರೋಧವಾಗಿ ಮತ್ತು ರೈತರ ಸಾಲಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆಯನ್ನು ನಡೆಸಲಾಗುತ್ತಿದೆ.

ಪ್ರತಿಭಟನೆಯಲ್ಲಿ ಬಿಜೆಪಿಯ ಸಂಸದರು, ಶಾಸಕರು, ರಾಜ್ಯಾಧ್ಯಕ್ಷ ಯಡಿಯೂರಪ್ಪ, ಕೆ.ಎಸ್.ಈಶ್ವರಪ್ಪ ಇನ್ನಿತರರು ಭಾಗಿಯಾಗಿದ್ದಾರೆ. ಪ್ರತಿಭಟನೆಯಲ್ಲಿ ಆರ್.ಅಶೋಕ್ ಅವರು ಮಾತನಾಡಿದ್ದು, ರಾಜ್ಯ ಸರ್ಕಾರವು ರೈತರ ಸಮಸ್ಯೆಗಳನ್ನು ಮತ್ತು ಸಾಲಮನ್ನಾದ ವಿಚಾರದಲ್ಲಿ ಮೋಸವನ್ನು ಮಾಡಿದೆ. ರಾಜ್ಯ ಸರ್ಕಾರವು ICUನಲ್ಲಿದೆ ಯಾವ ಹಂತದಲ್ಲಾದರು ಪತನಗೊಳ್ಳಬಹುದು ಎಂದು ಹೇಳಿದ್ದಾರೆ.