ವಿಜಯಪುರ(ಜೂನ್.10) ವಿಜಯಪುರದಲ್ಲಿ ಸುದ್ದಿಗೋಷ್ಠಿ ನಡೆಸಿದ ಜೆಡಿಎಸ್ ಶಾಸಕ ದೇವಾನಂದ್ ಅವರು ಗೃಹ ಸಚಿವ ಎಂ.ಬಿ.ಪಾಟೀಲ್ ಅವರ ಪ್ರತಿಮೆಯನ್ನು ನಿರ್ಮಿಸಲಾಗುವುದು ಎಂದು ಎಂ.ಬಿ.ಪಾಟೀಲ್ ಸಮ್ಮುಖದಲ್ಲಿಯೇ ಘೋಷಣೆ ಮಾಡಿದ್ದಾರೆ.

ಕೃಷ್ಣಾ ಮೇಲ್ದಂಡೆ ಯೋಜನೆಗೆ ಕೊಡುಗೆಯಾಗಿ ವಿಜಯಪುರದ ಸಿಂದಗಿ ತಾಲ್ಲೂಕಿನ ಗೊಲಗೇರಿಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪ್ರತಿಮೆಯನ್ನು ಸ್ಥಾಪಿಸಲಾಗಿದೆ. ಅದೇ ರೀತಿಯಂತೆ ಸಚಿವ ಎಂ.ಬಿ.ಪಾಟೀಲ್ ರವರು ಈ ಹಿಂದೆ ಜಲಸಂಪನ್ಮೂಲ ಸಚಿವರಾಗಿದ್ದಾಗ ಬರದ ನಾಡು ವಿಜಯಪುರ ಜಿಲ್ಲೆಗೆ ಸಾಕಷ್ಟು ನೀರಾವರಿ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ.

ಈ ಭಾಗದ ಭಂಜರು ಭೂಮಿಗೆ ಬೇಕಾದಷ್ಟು ನೀರುಣಿಸಿದ್ದಾರೆ, ಈ ಹಿನ್ನೆಲೆಯಲ್ಲಿ ವಿಜಯಪುರ ನಗರದ ಸೋಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಎಂ.ಬಿ.ಪಾಟೀಲ್ ರ ಪ್ರತಿಮೆಯನ್ನು ಸ್ಥಾಪಿಸುವುದಾಗಿ ಶಾಸಕ ದೇವಾನಂದ್ ಚೌವ್ಹಾಣ್ ತಿಳಿಸಿದ್ದಾರೆ.