ಸುಳ್ಯ(ಆ:20): ಶಾಸಕ ಎಸ್.ಅಂಗಾರರಿಗೆ ಕೊನೆ ಕ್ಷಣದಲ್ಲಿ ಮಂತ್ರಿ ಪದವಿ ಕೈತಪ್ಪಿದ ಹಿನ್ನಲೆಯಲ್ಲಿ ತೀವ್ರ ಅಸಮಾಧಾನ ಮತ್ತು ಆಕ್ರೋಶಗೊಂಡಿರುವ ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡರು ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ.

ಮಂತ್ರಿಸ್ಥಾನ ನಿರಾಕರಣೆಯ ಬೆಳವಣಿಗೆಯ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿ ತುರ್ತು ಸಭೆ ಸೇರಿದ ಮುಖಂಡರು ಈ ನಿರ್ಧಾರಕ್ಕೆ ಬಂದಿದ್ದು, ತಮ್ಮ ತೀರ್ಮಾನವನ್ನು ಬಿಜೆಪಿ ಜಿಲ್ಲಾಧ್ಯಕ್ಷರೂ ಆಗಿರುವ ಪುತ್ತೂರು ಶಾಸಕ ಸಂಜೀವ ಮಠಂದೂರು ಅವರಿಗೆ ತಿಳಿಸಲು ಕಾಯುತ್ತಿದ್ದಾರೆ ಎಂದು ತಿಳಿದುಬಂದಿದೆ.

ಸಂಜೀವ ಮಠಂದೂರು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ತೆರಳಿದ್ದು, ಅವರು ಬಂದ ಬಳಿಕ ಸುಳ್ಯದ ಮುಖಂಡರು ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ. ಸುಳ್ಯ ಶಾಸಕ ಎಸ್.ಅಂಗಾರ ಪ್ರಮಾಣ ವಚನ ಸ್ವೀಕಾರ ಸಮಾರಂಭದಿಂದ ದೂರ ಉಳಿದಿದ್ದಾರೆ.