ಬೆಂಗಳೂರು(ಮೇ.30) ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರ್ಯ ಅಭ್ಯರ್ಥಿ ಸುಮಲತಾ ಅಂಬರೀಶ್ ಸಿಎಂ ಕುಮಾರಸ್ವಾಮಿಯವರ ಪುತ್ರ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ವಿರುದ್ಧ ಅಧಿಕ ಮತಗಳ ಅಂತರದಿಂದ ಗೆಲುವನ್ನು ಸಾಧಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಬಿಜೆಪಿ ನೇತೃತ್ವದ ಎನ್‍ಡಿಎ ಸರ್ಕಾರದಲ್ಲಿ ಸಂಸದೆ ಸುಮಲತಾ ಅಂಬರೀಶ್‍ರವರಿಗೆ ಕೇಂದ್ರದಲ್ಲಿ ಸಚಿವೆ ಸ್ಥಾನ ಸಿಗುತ್ತಾ ಎಂಬ ಪ್ರಶ್ನೆ ಎಲ್ಲರಲ್ಲೂ ಮನೆಮಾಡಿದೆ.

ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಬಿಜೆಪಿಯ ನರೇಂದ್ರ ಮೋದಿಯವರು ಬಾಹ್ಯವಾಗಿ ಬೆಂಬಲವನ್ನು ಪಡೆಯುತ್ತಿದ್ದಾರೆ ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಮೈತ್ರಿ ಸರ್ಕಾರಕ್ಕೆ ಟಾಂಗ್ ನೀಡಲು ಕೇಂದ್ರದ ಬಿಜೆಪಿ ಸರ್ಕಾರ ಸುಮಲತಾರವರಿಗೆ ಸಚಿವ ಸ್ಥಾನ ನರೇಂದ್ರ ಮೋದಿ ನೀಡಬಹುದು ಎಂದು ಹೇಳಲಾಗುತ್ತಿದೆ.