ನವದೆಹಲಿ(ಜ29): ಮ್ಯಾಕ್ಸಿಸ್ ಹಗರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸುತ್ತಿರುವ ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಪುತ್ರ ಕಾರ್ತಿ ಚಿದಂಬಂರಂ ಅವರ ವಿದೇಶಿ ಪ್ರವಾಸಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್ ಹಾಕಿದ್ದು, ವಿದೇಶಕ್ಕೆ ಹೋಗಲು ಅನುಮತಿ ನೀಡುವುದಿಲ್ಲ ಎಂದು ಹೇಳಿದೆ.

ಫೆಬ್ರವರಿ ಮತ್ತು ಮಾರ್ಚ್ ನಲ್ಲಿ ಇಂಗ್ಲೆಂಡ್, ಸ್ಪೇನ್ ಜರ್ಮನಿ ಹಾಗೂ ಫ್ರಾನ್ಸ್‍ನಲ್ಲಿ ನಡೆಯಲ್ಲಿರುವ ಟೆನ್ನಿಸ್ ಪಂದ್ಯಾವಳಿ ವೀಕ್ಷಿಸಲು ಕಾರ್ತಿ ವಿದೇಶ ಪ್ರವಾಸಕ್ಕೆ ತೆರಳಲು ಅವಕಾಶ ನೀಡುವಂತೆ ಸುಪ್ರೀಂ ಕೋರ್ಟ್‍ಗೆ ಮನವಿ ಮಾಡಿಕೊಂಡಿದ್ದರು.

ಇದಕ್ಕೂ ಮೊದಲು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು, ಕಾರ್ತಿ ಚಿದಂಬರಂ ತನಿಖೆಗೆ ಸಹಕರಿಸುತ್ತಿಲ್ಲ. ವಿದೇಶಿ ಪ್ರವಾಸದ ನೆಪದಲ್ಲಿ ಪದೇಪದೆ ತಪ್ಪಿಸಿಕೊಳ್ಳುತ್ತಿದ್ದಾರೆ ಇದರಿಂದ ಪ್ರಕರಣದ ವಿಚಾರಣೆ ವಿಳಂಬವಾಗುತ್ತಿದೆ ಎಂದು ಕೋರ್ಟ್ ಮುಂದೆ ಆರೋಪಿಸಿದ್ದರು.

ಇನ್ನು ಈ ಆಪಾದನೆಯನ್ನು ಗಂಭೀರವಾಗಿ ತೆಗೆದುಕೊಂಡಿರುವ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ವಿಚಾರಣೆಯಿಂದ ತಪ್ಪಿಸಿಕೊಳ್ಳಲು ವಿದೇಶಿ ಪ್ರವಾಸ ಕೈಗೊಳ್ಳುವ ಯೋಜನೆಯಲ್ಲಿದ್ದಿರಿ ವಿದೇಶಕ್ಕೆ ತೆರಳಲು ಆವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.

ವಿಚಾರಣೆಗೆ ಸಂಬಂಧಿಸಿದಂತೆ ಕಾರ್ತಿ ಚಿದಂಬರಂ ಯಾವಾಗ ಹಾಜರಾಗಬೇಕು ಎಂಬುವುದರ ಕುರಿತು ದಿನಾಂಕ ನಿಗಧಿ ಪಡಿಸುವಂತೆ ಸುಪ್ರೀಂ ಕೋರ್ಟ್ ಇಡಿ ಅಧಿಕಾರಿಗಳಿಗೆ ಸೂಚಿಸಿದೆ