ನವದೆಹಲಿ(ನ.13) ಸುಪ್ರೀಂಕೋರ್ಟ್ ಹಾಗೂ ಮುಖ್ಯ ನ್ಯಾಯಮೂರ್ತಿಯವರು ಸಾರ್ವಜನಿಕ ಸ್ವಾಮಕ್ಕೆ ಸೇರುವ ಕುರಿತಂತೆ ಮಾಹಿತಿ ಹಕ್ಕು ಕಾಯ್ದೆಯ ಅಡಿ ಬರುವಂತೆ ಕುರಿತ ತೀರ್ಪನ್ನು ಕೋರ್ಟ್ ಪ್ರಕಟಿಸಿದೆ.

ಈ ಹಿಂದೆ 2010ರಲ್ಲಿ ದೆಹಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಹಾಗೂ ಸುಪ್ರೀಂ ಕೋರ್ಟ್ ಸಾರ್ವಜನಿಕ ಸ್ವಾಮ್ಯಕ್ಕೆ ಸೇರುತ್ತದೆ ಎಂದು ತೀರ್ಪು ನೀಡಿತ್ತು. ಈ ತೀರ್ಪನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‍ನ ಪ್ರಧಾನ ಕಾರ್ಯದರ್ಶಿ ಹಾಗೂ ಕೇಂದ್ರೀಯ ಸಾರ್ವಜನಿಕ ಸಂಪರ್ಕಾಧಿಕಾರಿಯವರು 2010ರಲ್ಲಿ ಮೂರು ಅರ್ಜಿಗಳ ಮೂಲಕ ಸುಪ್ರೀಂ ಕೋರ್ಟ್‍ನಲ್ಲಿ ಪ್ರಶ್ನಿಸಿದ್ದರು.

ಇಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ನೇತೃತ್ವದ ಐವರು ಸದಸ್ಯರ ನ್ಯಾಯಪೀಠ ಈ ಅರ್ಜಿಗಳ ವಿಚಾರಣೆ ನಡೆಸಿ ಮುಖ್ಯ ನ್ಯಾಯಮೂರ್ತಿ ಹುದ್ದೆ ಆರ್‍ಟಿಐ ವ್ಯಾಪ್ತಿಗೆ ಬರಲಿದೆ ಎಂದು ತಿಳಿಸಿದೆ.

ಅದರಂತೆ 201ರ ದೆಹಲಿ ಹೈಕೋರ್ಟ್ ತೀರ್ಪಿನ ವಿರುದ್ಧವಾಗಿ ಸುಪ್ರೀಂ ಕೋರ್ಟ್‍ನ ಕೇಂದ್ರೀಯ ಸಾರ್ವಜನಿಕ ಸಂಪರ್ಕಾಧಿಕಾರಿಯವರು ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರ ನೇತೃತ್ವದಲ್ಲಿ ಸುಪ್ರೀಂ ಕೋರ್ಟ್‍ನ ಐದು ನ್ಯಾಯಾಧೀಶರಿದ್ದ ನ್ಯಾಯಪೀಠ ಸುಪ್ರೀಂ ಕೋರ್ಟ್‍ನ ಮುಖ್ಯನ್ಯಾಯಮೂರ್ತಿ ಸಾರ್ವಜನಿಕ ಪ್ರಾಧಿಕಾರವಾಗಿದ್ದು ಆರ್‍ಟಿಐ ಕಾರ್ಯಕರ್ತರಾದ ಎಸ್.ಸಿ. ಅಗರ್‍ವಾಲ್‍ರವರು ಕೋರಿರುವ ನ್ಯಾಯಾಧೀಶರ ಆಸ್ತಿಯ ವಿವರಗಳನ್ನು ಒದಗಿಸುವಂತೆ ಪ್ರಧಾನ ಕಾರ್ಯದರ್ಶಿಗೆ ನಿರ್ದೇಶನ ನೀಡಿದೆ.