ನವದೆಹಲಿ(ಜ.07):ಎರಿಕ್ಸ್ ಇಂಡಿಯಾ ಸಂಸ್ಥೆ ಸಲ್ಲಿಸಿದ ಬಹುಕೋಟಿ ರೂ. ಹಣಕಾಸು ಬಾಕಿ ವಸೂಲಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಇಂದು ರಿಲಯನ್ಸ್ ಕಮ್ಯೂನಿಕೇಷನ್ ಲಿಮಿಟೆಡ್ ಅಧ್ಯಕ್ಷ ಅನಿಲ್ ಅಂಬಾನಿಗೆ ನೋಟಿಸ್ ಜಾರಿಗೊಳಿಸಿದೆ.

ಈ ಬಗ್ಗೆ ನಾಲ್ಕು ವಾರಗಳ ಒಳಗೆ ಉತ್ತರ ನೀಡುವಂತೆ ಅಂಬಾನಿ ಮತ್ತು ಇತರರಿಗೆ ನ್ಯಾಯಮೂರ್ತಿ ಆರ್.ಎಫ್. ನಾರಿಮನ್ ಅವರನ್ನು ಒಳಗೊಂಡ ಪೀಠ ಸೂಚನೆ ನೀಡಿದೆ.

ಅಂಬಾನಿ ಪರವಾಗಿ ಕೋರ್ಟ್‍ನಲ್ಲಿ ಹಾಜರಿದ್ದ ಕಪಿಲ್ ಸಿಬಲ್ ಮತ್ತು ಮುಕಲ್ ರೋಹಟಗಿ ಅವರು ಏರಿಕ್ ಸಂಸ್ಥೆಗೆ ನೀಡಬೇಕಾದ 118 ಕೋಟಿ ರೂ.ಗಳ ಮೊತ್ತವನ್ನು ಸ್ವೀಕರಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದರು. ಆದರೆ ಎರಿಕ್‍ಸನ್ ಪರವಾಗಿ ನ್ಯಾಯಾಲಯದಲ್ಲಿ ಹಾಜರಿದ್ದ ವಕೀಲರು ಸ್ವೀಕರಿಸಲು ನಿರಾಕರಿಸಿ ಬರಬೇಕಾದ 550 ಕೋಟಿ ರೂ.ಗಳನ್ನು ಠೇವಣಿ ಇಡಬೇಕೆಂದು ಆಗ್ರಹಿಸಿದರು.

ಇನ್ನು ವಾದ ಪ್ರತಿವಾದಗಳನ್ನು ಆಲಿಸಿದ ನಂತರ ಕೋರ್ಟ್ ರಿಲಯನ್ಸ್ ಕಮ್ಯೂನಿಕೇಷನ್ ಲಿಮಿಟೆಡ್ ಗೆ 118 ಕೋಟಿ ರೂ.ಗಳ ಡಿಮ್ಯಾಂಡ್ ನಿಲ್ಲಿಸುವಂತೆ ಸೂಚನೆ ನೀಡಿದೆ.