.

ಬೆಂಗಳೂರು(ಏ.02): ಕೊನೇ ಗಳಿಗೆಯ ವರೆಗೂ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಸಿಗುತ್ತದೆ ಎಂದು ಕಾದಿದ್ದ ತೇಜಸ್ವಿನಿ ಅನಂತ್‍ಕುಮಾರ್ ಅವರಿಗೆ ಟಕೆಟ್‍ನ್ನು ನೀಡಿಲ್ಲ ಇದರಿಂದ ತೇಜಸ್ವಿನಿ ಅಸಮಾಧಾನಗೊಂಡಿದ್ದರು ಇದನ್ನು ಶಮನ ಮಾಡಲು ಬಿಜೆಪಿ ಇದೀಗ ಅವರಿಗೆ ರಾಜ್ಯ ಉಪಾಧ್ಯಕ್ಷೆ ಸ್ಥಾನವನ್ನು ನೀಡಿದೆ.

ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತೇಜಸ್ವಿನಿ ಅನಂತ್‍ಕುಮಾರ್ ಅವರು ರಾಜ್ಯ ಬಿಜೆಪಿ ಉಪಾಧ್ಯಕ್ಷೆಯಾಗಿ ನೇಮಕವಾಗಿರುವುದು ಸಂತೋಷ ತಂದಿದೆ ಎಂದಿದ್ದಾರೆ.

ಕೇಂದ್ರ ಸಚಿವರಾಗಿದ್ದ ಅನಂತ್‍ಕುಮಾರ್ ಅವರ ನಿಧನದ ನಂತರ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ತೇಜಸ್ವಿನಿ ಅವರನ್ನು ಕಣಕ್ಕಿಳಿಸಲು ಈ ಹಿಂದೆ ಹೈಕಮಾಂಡ್ ನಿರ್ಧರಿಸಿತ್ತು. ಟಿಕೆಟ್ ತಮಗೆ ಸಿಗುತ್ತದೆ ಎಂದು ತೇಜಸ್ವಿನಿ ಅವರು ಕ್ಷೇತ್ರದಲ್ಲಿ ಓಡಾಟ ಆರಂಭಿಸಿದ್ದರು. ಆದರೆ,ಕೊನೇ ಗಳಿಗೆಯಲ್ಲಿ ಇವರ ಬದಲಿಗೆ ತೇಜಸ್ವಿ ಸೂರ್ಯ ಅವರಿಗೆ ಪಕ್ಷ ಟಿಕೆಟ್ ನೀಡಿತು.