ಬಳ್ಳಾರಿ(ಏ:2) : ಕಳೆದ ಬಾರಿ ಲೋಕಸಭೆ ಚುನಾವಣೆಗಿಂತ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಮೋದಿ ಅಲೆ ಹೆಚ್ಚಾಗಿದ್ದು, ದೇಶದಲ್ಲಿ ಬಿಜೆಪಿ 300 ಸ್ಥಾನಗಳನ್ನು ಗಳಿಸಲಿದೆ. ರಾಜ್ಯದಲ್ಲಿ 22ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದೇವೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಬಳ್ಳಾರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶಾದ್ಯಂತ ಮೋದಿ ಅಲೆ ಮತ್ತಷ್ಟು ಹೆಚ್ಚಾಗಿದೆ , ಕಳೆದ ಬಾರಿಗಿಂತ ಹೆಚ್ಚು ಬಹುಮತ ಗಳಿಸಿ ಬಿಜೆಪಿ ಅಧಿಕಾರ ಹಿಡಿಯಲಿದೆ, ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ ಎಂದು ಹೇಳಿದರು. ನನ್ನ ಮೇಲೆ ಡೈರಿ ಸಂಬಂಧ ಸುಳ್ಳು ಆರೋಪ ಮಾಡಲಾಗಿದೆ. ಐಟಿ ಇಲಾಖೆಯವರು ಅದು ನಕಲಿ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದಾರೆ ಎಂದು ತಿಳಿಸಿದರು.