ನವದೆಹಲಿ(ಜ,29): ದೇಶಕ್ಕೆ ಸಮರ್ಥ ನಾಯಕತ್ವದ ಅಗತ್ಯವಿದೆ. ಅದಕ್ಕೆ ಮೋದಿಯವರೇ ಸೂಕ್ತ ವ್ಯಕ್ತಿ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಖಾತೆ ಸಚಿವ ರಾಮ್‍ವಿಲಾಸ್ ಪಾಸ್ವಾನ್ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿದ್ದು ಮೋದಿ ಅವರೇ ಪುನಃ ಪ್ರಧಾನಿಯಾಗುವುದು ಎಂದು ಭವಿಷ್ಯ ನುಡಿದಿದ್ದಾರೆ.

ಕೆಲವೊಂದು ದೇಶಗಳು ಭಾರತಕ್ಕೆ ವೈರಿಗಳಾಗಿವೆ. ಇದನ್ನು ಎದುರಿಸಲು ಸ್ಥಿರ ಸರಕಾರದ ಅವಶ್ಯಕತೆ ಇದೆ ಇದಕ್ಕೆ ಮೋದಿಯವರೆ ಸೂಕ್ತ ಎಂದು ಹೇಳಿದ್ದಾರೆ. ರಾಹುಲ್ ಗಾಂಧಿ ಅವರನ್ನು ಪ್ರಧಾನಿಯಾಗಿ ಸ್ವೀಕರಿಸಲು ಸಾಧ್ಯವಿಲ್ಲ ಇಷ್ಟು ವರ್ಷಗಳಲ್ಲಿ ದೇಶಕ್ಕೆ ಕಾಂಗ್ರೆಸ್ ಏನು ಮಾಡಿದೆ ಎನ್ನುವುದು ಜನತೆಗೆ ಗೊತ್ತಿದೆ ಎಂದಿದ್ದಾರೆ.