ಬೆಂಗಳೂರು:(ಜ24): ನೀರಿನ ಸಮಸ್ಯೆಯನ್ನು ಪರಿಹರಿಸುವ ಸಲುವಾಗಿ ರಾಜ್ಯ ಸರ್ಕಾರವು ಹೊಸದೊಂದು ಯೋಜನೆಯನ್ನು ರೂಪಿಸಿದೆ.

ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಒದಗಿಸುವ ಸಲುವಾಗಿ ರಾಜ್ಯ ಸರ್ಕಾರವು ಈ ಹೊಸ ಯೋಜನೆಯನ್ನು ರೂಪಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ.

ಇದಕ್ಕಾಗಿ 29 ಸಾವಿರ ಕಾಮಗಾರಿಗಳನ್ನು ಗ್ರಾಮೀಣ ಭಾಗದಲ್ಲಿ ಕೈಗೊಳ್ಳಲಾಗಿದ್ದು, 2,400 ಕೋಟಿ ರೂ, ಶಾಸಕರ ನೇತೃತ್ವದ ಟಾಸ್ಕ್ ಪೋರ್ಸ್‍ಗೆ 200 ಕೋಟಿ ರೂ ಅನುದಾನವನ್ನು ನೀಡಲಾಗಿದೆ.

ಈಗಾಗಲೇ 27 ಸಾವಿರ ಕಾಮಗಾರಿಗಳು ಸಂಪೂರ್ಣಗೊಂಡಿದ್ದು, ಇನ್ನು ಉಳಿದ 2000 ಕಾಮಗಾರಿಗಳು ಒಂದೆರಡು ತಿಂಗಳಲ್ಲಿ ಪೂರ್ಣಗೊಳ್ಳಲಿವೆ ಎಂದು ಸಚಿವರಾದ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ.