ನವದೆಹಲಿ(ಮಾ:18):ಪುರುಷರ ವಿಭಾಗದ ಐಸಿಸಿ ಏಕದಿನ ಶ್ರೇಯಾಂಕ ಪಟ್ಟಿ ಬಿಡುಗಡೆ ಮಾಡಿದ್ದು,ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಅಗ್ರಸ್ಥಾನದಲ್ಲಿದ್ದಾರೆ. ಹಾಗೂ ಉಪನಾಯಕ ರೋಹಿತ್ ಶರ್ಮಾ ಎರಡನೇ ಸ್ಥಾನದಲ್ಲಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅನುಕ್ರಮವಾಗಿ ಒಟ್ಟಾರೆ 310 ಹಾಗೂ 202 ರನ್ ಗಳನ್ನು ದಾಖಲಿಸಿದ್ದರು,ಇದೇ ವೇಳೆ ದಕ್ಷಿಣ ಆಫ್ರಿಕಾ ತಂಡದ ಆರಂಭಿಕ ಬ್ಯಾಟ್ಸ್ಮನ್ ಕ್ವಿಂಟನ್ ಡಿ ಕಾಕ್ 4ನೇ ಸ್ಥಾನದಲ್ಲಿದ್ದಾರೆ.

ಇನ್ನು ಬೌಲಿಂಗ್ ವಿಭಾಗದಲ್ಲಿ ಭಾರತ ತಂಡದ ವೇಗಿ ಜಸ್ಪ್ರೀತ್ ಬುಮ್ರಾ ಮೊದಲನೇ ಸ್ಥಾನದಲ್ಲಿದ್ದು,ನ್ಯೂಝಿಲ್ಯಾಂಡ್ ತಂಡದ ವೇಗಿ ಟ್ರೆಂಟ್ ಬೌಲ್ಟ್ ಎರಡನೇ ಸ್ಥಾನದಲ್ಲಿದ್ದಾರೆ.ಭಾರತ ತಂಡದ ಸ್ಪಿನ್ ಬೌಲರ್ ಯುಜ್ವೇಂದ್ರ ಚಾಹಲ್ 8ನೇ ಸ್ಥಾನದಲ್ಲಿದ್ದಾರೆ.