ರಾಯಚೂರು(ಅ.11) ರಾಯಚೂರು ಜಿಲ್ಲೆಯಾದ್ಯಂತ ಕಳೆದ ಒಂದು ವಾರದಿಂದ ಉತ್ತಮ ಮಳೆಯಾಗಿದ್ದು, ಜಿಲ್ಲೆಯಾದ್ಯಂತ ಹಳ್ಳಗಳು ತುಂಬಿ ಹರಿಯುತ್ತಿವೆ.

ರಾಯಚೂರಿನ ಪಕ್ಕದ ಜಿಲ್ಲೆಯಾದ ಕೊಪ್ಪಳದ ಕುಷ್ಟಗಿ ಹಾಗು ಗದಗ ಜಿಲ್ಲೆಯಲ್ಲಿ ಭಾರೀ ಪ್ರಮಾಣದ ಮಳೆಯಾಗಿದ್ದು, ರಾಯಚೂರು ಜಿಲ್ಲೆಯ ಮಸ್ಕಿ ಡ್ಯಾಮ್ ಸುಮಾರು 10 ವರ್ಷಗಳ ಬಳಿಕ ಮೈದುಂಬಿಕೊಂಡಿದೆ. ಕೊಪ್ಪಳ ಜಿಲ್ಲೆಯಲ್ಲಿ ಅಧಿಕ ಪ್ರಮಾಣದ ಮಳೆ ಬಿದ್ದಿದ್ದರಿಂದ 2500 ಕ್ಯೂಸೆಕ್ಸ್ ನೀರು ಹರಿದು ಬರುತ್ತಿದೆ.

0.5 ಟಿಎಂಸಿ ನೀರು ಸಾಮರ್ಥ್ಯ ಹೊಂದಿರುವ ಈ ಜಲಾಶಯವು ಮೊದಲ ಬಾರಿಗೆ ಸಂಪೂರ್ಣ ಭರ್ತಿಯಾಗಿದೆ. ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ 3000 ಕ್ಯೂಸೆಕ್ಸ್ ನೀರನ್ನು ಹೊರಬಿಡಲಾಗಿದ್ದು, ನದಿ ತೀರದ ಹಳ್ಳ, ಕೊಳ್ಳಗಳು ತುಂಬಿ ಹರಿಯುತ್ತಿವೆ.