ಬೆಂಗಳೂರು:(ಜ28): ಸ್ಯಾಂಡಲ್‍ವುಡ್‍ನ ಹಿರಿಯ ನಟ ತುಳು ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ಇದು ಅವರು ತುಳುವಿನಲ್ಲಿ ನಟಿಸುತ್ತಿರುವ ಚೊಚ್ಚಲ ಚಿತ್ರವಾಗಿದೆ.

“ಇಂಗ್ಲಿಷ್” ಎಂಬ ಟೈಟಲ್ ಚಿತ್ರದಲ್ಲಿ ಅನಂತ್‍ನಾಗ್ ನಟಿಸುತ್ತಿದ್ದು, ಈ ಸಿನಿಮಾವನ್ನು ಕೆ. ಸೂರಜ್ ಶೆಟ್ಟಿ ನಿರ್ದೇಶನ ಮಾಡುತ್ತಿದ್ದಾರೆ.

ಹರೀಶ್ ಶೇರಿಗಾರ್, ಶರ್ಮಿಳಾ ಶೇರಿಗಾರ್ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದು, ಈ ಚಿತ್ರಕ್ಕೆ ಮಣಿಕಾಂತ್ ಖದ್ರಿ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ.

ಈ ಚಿತ್ರದಲ್ಲಿ ಅನಂತ್‍ನಾಗ್ ಅವರ ಪಾತ್ರವೇನು ಎಂಬುದು ತಿಳಿದು ಬಂದಿಲ್ಲ. ಒಟ್ಟಿನಲ್ಲಿ ಕನ್ನಡದ ನಟರೊಬ್ಬರು ತುಳುವಿನ ಇಂಗ್ಲೀಷ್ ಚಿತ್ರದಲ್ಲಿ ನಟಿಸುತ್ತಿರುವುದು ಹೆಮ್ಮೆಯ ವಿಷಯ.