ಬೆಂಗಳೂರು(ಜ:18): ತುಮಕೂರು ಸಿದ್ದಗಂಗಾ ಶ್ರೀಗಳಿಗೆ ಭಾರತರತ್ನ ಪ್ರಶಸ್ತಿ ನೀಡುವ ಕುರಿತು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೆಚ್ಚಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಸೇರಿದಂತೆ ರಾಜ್ಯದ ಬಿಜೆಪಿ ಸಂಸದರು ಪ್ರಧಾನಿ ಮೋದಿಗೆ ಮನವಿ ಸಲ್ಲಿಸುವುದಾಗಿ ತಿಳಿಸಿರುವ ಬೆನ್ನಲ್ಲೇ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಸಹಾ ಶ್ರೀಗಳಿಗೆ ಭಾರತ ರತ್ನ ನೀಡುವಂತೆ ಒತ್ತಾಯಿಸಿದ್ದಾರೆ.

ಈ ವಿಚಾರವಾಗಿ ಕುಮಾರಸ್ವಾಮಿ ಅವರೇ ಖುದ್ದಾಗಿ ಮೋದಿಯವರನ್ನು ಭೇಟಿ ಮಾಡಿ ಮನವಿ ಮಾಡುವುದಾಗಿ ತಿಳಿಸಿದ್ದಾರೆ,ಶ್ರೀಗಳಿಗೆ ಭಾರತರತ್ನ ಪ್ರಶಸ್ತಿ ನೀಡುವುದರಿಂದ ಆ ಪ್ರಶಸ್ತಿಯ ಗೌರವ ದುಪ್ಪಟ್ಟಾಗುತ್ತದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.