ಬೆಂಗಳೂರು(ಮೇ:30): ರಾಜ್ಯ ಮೈತ್ರಿ ಸರ್ಕಾರದಲ್ಲಿ ಸಚಿವ ಸಂಪುಟವನ್ನು ವಿಸ್ತರಣೆ ಮತ್ತು ಪುನಾರಚನೆ ಮಾಡುವ ವಿಚಾರ ಚರ್ಚೆಯಲ್ಲಿತ್ತು. ಈ ಕುರಿತಾಗಿ ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಸದ್ಯದ ದಿನಗಳಲ್ಲಿ ಸಚಿವ ಸಂಪುಟವನ್ನು ವಿಸ್ತರಣೆ ಮಾಡುವುದಿಲ್ಲ ಮತ್ತು ಪುನಾರಚನೆಯನ್ನು ಮಾಡುವುದಿಲ್ಲ ಮುಂದಿನ ದಿನಗಳಲ್ಲಿ ಸಂಪುಟ ಪುನಾರಚನೆ ಮಾಡುತ್ತೇವೆ ಎಂದು ತಿಳಿಸಿದರು.

ಮೈತ್ರಿ ಸರ್ಕಾರಕ್ಕೆ ಟ್ರಬಲ್ ಆಗಿದ್ದ ರಮೇಶ್ ಜಾರಕಿಹೊಳಿ ಪಕ್ಷ ಬಿಡುವ ವಿಚಾರದ ಹಿನ್ನೆಲೆ. ರಮೇಶ್ ಜಾರಕಿಹೊಳಿ ಕಾಂಗ್ರೆಸ್ ಪಕ್ಷವನ್ನು ಬಿಡುವುದಿಲ್ಲ, ರಮೇಶ್ ಜೊತೆ ಪಕ್ಷದ ನಾಯಕರು ಚರ್ಚೆ ನಡೆಸಿದ್ದೇವೆ ಮತ್ತು ನಾನೂ ಕೂಡ ಮಾತಾಡುತ್ತೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.