ಮುಂಬೈ:(ಫೆ27): ಭಾರತೀಯ ಸೇನೆ ಪಾಕಿಸ್ತಾನದಲ್ಲಿರುವ ಉಗ್ರ ನೆಲೆಗಳನ್ನು ಧ್ವಂಸಗೊಳಿಸಿದ್ದು, ಇದರ ಬೆನ್ನಲಿಯೇ ಶಾಲೆಗಳಲ್ಲಿ ಬಿಗಿ ಭದ್ರತೆಯನ್ನು ಕೈಗೊಳ್ಳುವಂತೆ ಮಹಾರಾಷ್ಟ್ರ ಸರ್ಕಾರ ಸೂಚಿಸಿದೆ.

ಶಾಲೆಗಳ ಆಡಳಿತ ಮಂಡಳಿಗೆ ಹಾಗೂ ಶಾಲಾ ವಾಹನಗಳ ಮಾಲೀಕರಿಗೂ ಮುನ್ನೆಚ್ಚರಿಕೆಯನ್ನು ನೀಡಲಾಗಿದೆ. ಜೊತೆಗೆ ಎಲ್ಲಾ ನಗರಗಳಲ್ಲಿಯು ಬಿಗಿ ಭದ್ರತೆಯನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರು ಶಾಸಕರುಗಳಿಗೆ
ಹೇಳಿದ್ದಾರೆ.

ಇನ್ನು ಪ್ರಮುಖ ಸ್ಥಳಗಳಲ್ಲಿ ಅಂದರೆ ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ, ಇನ್ನು ಇತರೆ ಪ್ರದೇಶಗಳಲ್ಲಿ ಭದ್ರತೆಯ ದೃಷ್ಟಿಯಿಂದ ಹೆಚ್ಚಿನ ಸಿಸಿ ಕ್ಯಾಮರಾ ಹಾಗೂ ಸಿಸಿಟಿವಿಗಳನ್ನು ಅಳವಡಿಸಲಾಗಿದೆ ಎಂದು ತಿಳಿದುಬಂದಿದೆ.

ಭಾರತೀಯ ಸೇನೆಯೂ ಪುಲ್ವಾಮ ದಾಳಿಯ ಪ್ರತಿಕಾರವನ್ನು ತೀರಿಸಿಕೊಂಡಿದ್ದು, ಉಗ್ರರನ್ನು ಉಡೀಸ್ ಮಾಡಿದೆ. ಇದರಿಂದ ದೇಶದೆಲ್ಲೆಡೆ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ.