ನವದೆಹಲಿ(ಫೆ18): ಮಾತುಕತೆ ಮೂಲಕ ಪಾಕಿಸ್ತಾನದೊಂದಿಗಿನ ಸಮಸ್ಯೆ ಪರಿಹರಿಸಿಕೊಳ್ಳುವ ಅವಕಾಶ ಮುಗಿದು ಹೋಗಿದೆ. ಇನ್ನೇನಿದ್ದರೂ ಕಾರ್ಯಾಚರಣೆ ಮಾತ್ರ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಭಯೋತ್ಪಾದನೆಯನ್ನು ಹತ್ತಿಕ್ಕಲು ಇಡೀ ವಿಶ್ವ ಒಂದಾಗಿ ಹೋರಾಟಬೇಕು. ಭಯೋತ್ಪಾದಕರ ವಿರುದ್ಧ ಕ್ರಮ ಕೈಗೊಳ್ಳದೇ ಇರುವುದು ಕೂಡ ಭಯೋತ್ಪಾದಕರಿಗೆ ಕುಮ್ಮಕ್ಕು ಕೊಟ್ಟಂತೆ. ಆದ್ದರಿಂದ, ಭಯೋತ್ಪಾದನೆಯ ನಿಗ್ರಹಕ್ಕೆ ಎಲ್ಲ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಜಮ್ಮು-ಕಾಶ್ಮೀರದ ಪುಲ್ವಾಮ ಜಿಲ್ಲೆಯ ಅವಂತಿಪೊರ ಪ್ರದೇಶದಲ್ಲಿ ಭಯೋತ್ಪಾದಕರು ಕಳೆದ ಗುರುವಾರ ಭೀಕರ ಬಾಂಬ್ ದಾಳಿ ನಡೆಸಿದ್ದರು. ಈ ವೇಳೆ ಮದ್ದೂರಿನ ಗುರು ಹೆಸರಿನ ಯೋಧ ಸೇರಿ 40 ಮಂದಿ ಸೈನಿಕರು ಹುತಾತ್ಮರಾಗಿದ್ದರು. 20 ವರ್ಷಗಳಲ್ಲಿ ನಡೆದ ದಾಳಿಗಳಲ್ಲಿ ಅತೀ ದೊಡ್ಡ ದಾಳಿ ಇದಾಗಿದೆ.