ಕಾಶ್ಮೀರ:(ಫೆ27): ಜೈಷ್ ಎ ಮೊಹಮದ್ ಸಂಘನೆಯ ಉಗ್ರರ ನೆಲೆಗಳನ್ನು ಭಾರತೀಯ ಸೇನೆ ಧ್ವಂಸಗೊಳಿಸಿದ ಬೆನ್ನಲಿಯೆ ಇಂದು ಶೋಪಿಯಾನ್ ಎನ್‍ಕೌಂಟರ್‍ನಲ್ಲಿ ಮತ್ತೊಬ್ಬ ಉಗ್ರನನ್ನು ಹತ್ಯೆ ಗೈದಿದೆ.

ಇನ್ನು ಪಾಕ್ ಹಾಗೂ ಭಾರತದ ನಡುವಿನ ಸಂಬಂಧ ಸಂಪೂರ್ಣ ಹದಗೆಟ್ಟಿದ್ದು, ಪರಿಸ್ಥಿತಿ ತೀರಾ ಗಂಭೀರವಾಗಿದೆ. ಮತ್ತೆ ಯೋಧರು ಹಾಗೂ ಉಗ್ರರ ನಡುವೆ ಗುಂಡಿನ ಚಕಾಮಕಿ ನಡೆದಿದೆ. ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ ಈ ಘಟನೆ ನಡೆದಿದ್ದು, ಭಾರತೀಯ ಯೋಧರು ಇಲ್ಲಿ ಒಬ್ಬ ಉಗ್ರನನ್ನು ಹತ್ಯೆಗೈದಿದ್ದಾರೆ.

ಇನ್ನು ಪಾಕಿಸ್ತಾನ ಗಡಿನಿಯಂತ್ರಣ ರೇಖೆಯನ್ನು ಉಲ್ಲಂಘಿಸಿ ದಾಳಿ ನಡೆಸಿದ ವೇಳೆ ಭಾರತೀಯ 05 ಜನ ಯೋಧರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಮಿಲಿಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.