ನವದೆಹಲಿ(ಮಾ:15): ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾದ ಸೋನಿಯಾ ಗಾಂಧಿ ಅವರ ಆಪ್ತ ಟಾಮ್ ವಡಕ್ಕನ್ ಅವರೇನೂ ದೊಡ್ಡ ನಾಯಕರಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ. ರಾಯ್ಪುರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಟಾಮ್ ವಡಕ್ಕನ್ ಅವರು ಬಿಜೆಪಿಗೆ ಸೇರ್ಪಡೆಯಾದ ವಿಚಾರಕ್ಕೆ ತೀಕ್ಷ್ಣ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

ಕೇರಳ ಮೂಲದವರಾದ ಟಾಮ್ ವಡಕ್ಕನ್,1990ರ ದಶಕದಲ್ಲಿ ಸೋನಿಯಾ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷರಾದಾಗ ಮಾಧ್ಯಮ ವಿಭಾಗದ ನೇತೃತ್ವ ವಹಿಸಿದ್ದರು. ಇತ್ತೀಚಿನ ದಿನಗಳಲ್ಲಿ ಅವರು ಪಕ್ಷದಲ್ಲಿ ಅಷ್ಟೇನೂ ಸಕ್ರಿಯರಾಗಿ ಕಾಣಿಸಿಕೊಳ್ಳುತ್ತಿರಲಿಲ್ಲ,ಅವರು ಕೇರಳದ ತ್ರಿಶ್ಯೂರ್ ನಿಂದ ಬಿಜೆಪಿ ಅಭ್ಯರ್ಥಿಯಾಗಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.