ಬೆಂಗಳೂರು(ಆ:19): ರಾಜ್ಯದಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ. ಇದಕ್ಕೆ ಸಿಎಂ ಯಡಿಯೂರಪ್ಪ ಅವರು ತಮ್ಮ ಪುತ್ರನನ್ನೇ ದಂಧೆಗೆ ಬಿಟ್ಟಿದ್ದಾರೆ ಎಂದು ಹೇಳಿಕೆ ನೀಡಿದ್ದ ಹೆಚ್.ಡಿ.ಕುಮಾರಸ್ವಾಮಿಗೆ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿಜಯೇಂದ್ರ ತಿರುಗೇಟು ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ವಿಜಯೇಂದ್ರ, ಕಮೀಷನ್ ದಂಧೆ ,ವರ್ಗಾವಣೆ ದಂಧೆ,ನೇಮಕಾತಿ ದಂಧೆಗಳ ಜನಕರು ಹಾಗೂ ಗುತ್ತಿಗೆದಾರರು ನೀವೆಂಬುದು ಇಡೀ ರಾಜ್ಯಕ್ಕೇ ತಿಳಿದಿದೆ ಕುಮಾರ ಸ್ವಾಮಿಯವರೇ, ‘ಕೋತಿ ತಾನು ತಿಂದು ಮೇಕೆ ಬಾಯಿಗೆವರೆಸಿ ದಂತಿದೆ ‘ನಿಮ್ಮ ಮಾತುಗಳು. ಸಿಬಿಐ ತನಿಖೆಗೆ ಹೆದರಿ ಹತಾಶ ಹೇಳಿಕೆ ನೀಡುತ್ತಿದ್ದೀರಿ ವಿಷಯಾಂತರಗೊಳಿಸಿ ಜನತೆಯ ಧಿಕ್ಕು ತಪ್ಪಿಸುವ ಕುತಂತ್ರದ ಮಾತು ನಿಲ್ಲಿಸಿ ಎಂದು ತಿರುಗೇಟು ನೀಡಿದ್ದಾರೆ.