ಬೆಂಗಳೂರು(ಜುಲೈ.30) ಕಳೆದ ಸೋಮವಾರದಂದು ರಮೇಶ್ ಕುಮಾರ್ ಅವರು ತಮ್ಮ ಸ್ಪೀಕರ್ ರಾಜೀನಾಮೆಯನ್ನು ನೀಡಿದ್ದು, ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಆಯ್ಕೆ ಮಾಡಲಾಗಿದೆ.

ನಾಳೆ ಬುಧವಾರದಂದು ಸದನದಲ್ಲಿ ಅಧಿಕೃತ ಘೋಷಣೆ ಮಾಡಲಾಗುವುದು ಎನ್ನಲಾಗಿದೆ. ವಿಧಾನಸಭಾ ಸ್ಪೀಕರ್‌ ಸ್ಥಾನಕ್ಕೆ ನಾಮಪತ್ರ ಸಲ್ಲಿಸುವುದಕ್ಕೆ ಇಂದು ಕೊನೆ ದಿನವಾಗಿತ್ತು. ಹೀಗಾಗಿ ಬಿಜೆಪಿಯಿಂದ ವಿಶ್ವೇಶ್ವರ ಹೆಗ್ಡೆಯವರು ಮಾತ್ರ ನಾಮ ಪತ್ರ ಸಲ್ಲಿಸಿದ್ದರು. ಇದಲ್ಲದೇ ಕಾಂಗ್ರೆಸ್‌ ಮತ್ತು ಜೆಡಿಎಸ್‌ನಿಂದ ಯಾವ ಅಭ್ಯರ್ಥಿಯು ಕೂಡ ನಾಮಪತ್ರವನ್ನು ಸಲ್ಲಿಸಿರಲಿಲ್ಲ ಹೀಗಾಗಿ ಕಾಗೇರಿ ಅವರು ಅವಿರೋಧವಾಗಿ ಆಯ್ಕೆಮಾಡಲಾಗಿದೆ.

ನೂತನ ಸ್ಪೀಕರ್‌ ಆಗಿ ಆಯ್ಕೆಯಾಗಿರುವ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಮಾಧ್ಯಮಗಳ ಜೊತೆ ಮಾತನಾಡಿದ್ದು, ಸಂತಸವನ್ನು ಹಂಚಿಕೊಂಡಿದ್ದಾರೆ. ‘ನಮ್ಮ ವರಿಷ್ಠರು, ನಮ್ಮ ನಾಯಕರು ಎಲ್ಲರೂ ಸೇರಿ ನನ್ನನ್ನು ಸ್ಪೀಕರ್​ ಆಗಿ ಆಯ್ಕೆ ಮಾಡಿದ್ದಾರೆ. ನಾನು ನಿಷ್ಠಾವಂತನಾಗಿ‌ ಸ್ಪೀಕರ್ ಹುದ್ದೆಯಲ್ಲಿ ನನ್ನ ಜವಾಬ್ದಾರಿಯನ್ನು ನಿರ್ವಹಿಸುತ್ತೇನೆ,’ ಎಂದು ಹೇಳಿದ್ದಾರೆ.