ಬೆಂಗಳೂರು:(ಫೆ11): ಕರ್ನಾಟಕ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ ನೌಕರರು ಸರ್ಕಾರಕ್ಕೆ ತಮ್ಮ ಬೇಡಿಕೆಯನ್ನು ಈಡೇರಿಸುವಂತೆ ಬೆಂಗಳೂರಿನ ಪ್ರೀಡಂ ಪಾರ್ಕ್‍ನಲ್ಲಿ ಪ್ರತಿಭಟನೆಯನ್ನು ನಡೆಸುತ್ತಿದ್ದು, ಸರ್ಕಾರ ನಮ್ಮ ಬೇಡಿಕೆ ಈಡೇರಿಸದಿದ್ದರೆ ನಿರಂತರ ಪ್ರತಿಭಟನೆ ನಡೆಸುತ್ತೇವೆ ಎಂಬ ಎಚ್ಚರಿಕೆ ನೀಡಿದ್ದಾರೆ.

ಈ ಪ್ರತಿಭಟನೆಯಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ರಾಜ್ಯದ ಎಲ್ಲಾ ರೀತಿಯ ಗುತ್ತಿಗೆದಾರರು ಅಂದರೆ ಹೊರಗುತ್ತಿಗೆ, ಒಳ ಗುತ್ತಿಗೆ ಹಾಗೂ ಗೌರವಧನ ನೌಕರರು ಭಾಗಿಯಾಗಿದ್ದಾರೆ.

ಇವರು ಸಮಾನ ವೇತನ ಹಾಗೂ ಸೇವಾ ಭದ್ರತೆ ಸಿಗಬೇಕು ಎಂಬ ಹಕ್ಕೋತ್ತಾಯದೊಂದಿಗೆ ಇನ್ನೂ ಹತ್ತು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆಯನ್ನು ನಡೆಸಲಾಗುತ್ತಿದೆ.

ಈಗಾಗಲೇ ಸರ್ಕಾರಕ್ಕೆ ಬೇಡಿಕೆಯನ್ನು ಈಡೇರಿಸುವಂತೆ ಮನವಿ ಮಾಡಿದರು, ಇಲ್ಲಿಯವರೆಗೂ ಸ್ಪಂದಿಸದೆ ಇರುವ ಕಾರಣಕ್ಕೆ ಮತ್ಮೊಮೆ ಹೋರಾಟದ ಕೂಗು ಕೇಳಿಬರುತ್ತಿದ್ದು, ಈ ಹೋರಾಟಕ್ಕೆ ಸರ್ಕಾರ ಸ್ಪಂದಿಸಿ ಬೇಡಿಕೆಯನ್ನು ಈಡೇರಿಸುತ್ತಾ ಎಂಬುದನ್ನು ಕಾದ್‍ನೋಡ್ಬೇಕಿದೆ.