ಮೈಸೂರು(ಏ:03): ಮಂಡ್ಯ ಲೋಕಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇದೀಗ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಅವರಿಗೆ ರಾಜವಂಶಸ್ಥ ಯಧುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪರೋಕ್ಷವಾಗಿ ಬೆಂಬಲ ಸೂಚಿಸಿದ್ದಾರೆ.

ಚುನಾವಣೆಯಲ್ಲಿ ಯಾವ ಪಕ್ಷದವರ ಜೊತೆಯೂ ಪ್ರಚಾರಕ್ಕೆ ಹೋಗುವುದಿಲ್ಲ,ಹಾಗೂ ಯಾವ ರಾಜಕೀಯ ಸಹ ಮಾಡುವುದಿಲ್ಲ, ಅಂಬರೀಷ್ ಅವರು ಅರಮನೆಯ ಕಷ್ಟದ ಸಂದರ್ಭದಲ್ಲಿ ಬೆನ್ನೆಲುಬಾಗಿ ನಿಂತಿದ್ದರು, ಅವರ ಸಹಾಯವನ್ನು ಮರೆಯುವಂತಿಲ್ಲ ಎಂದು ತಿಳಿಸಿದ್ದಾರೆ.