ಮುಂಬೈ(ಜ.29): ಮಹಾರಾಷ್ಟ್ರದಲ್ಲಿ ಶಿವಸೇನೆ ಹಾಗೂ ಬಿಜೆಪಿ ನಡುವಿನ ಮೈತ್ರಿ ಸರ್ಕಾರದಲ್ಲಿ ಹೊಂದಾಣಿಕೆ ಇಲ್ಲ ಎಂಬುದು ಮತ್ತೊಮ್ಮೆ ಸಾಭೀತಾಗಿದೆ.

ರಾಜ್ಯದಲ್ಲಿ ನಮ್ಮ ಪಕ್ಷವೇ ದೊಡ್ಡಣ್ಣ ಎಂದು ಹೇಳಿಕೆ ನೀಡಿದ್ದ ಶಿವಸೇನೆ ನಾಯಕ ಸಂಜಯ್ ರಾವತ್‍ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ನಮಗೆ ಶಿವಸೇನೆ ಮೈತ್ರಿ ಬೇಕೆಂದೇ ಇಲ್ಲ ಎಂದು ತಿರುಗೇಟು ನೀಡಿದ್ದಾರೆ.

ನಾವು ಹತಾಶೆಗೊಂಡು ಶಿವಸೇನೆ ಜೊತೆ ಮೈತ್ರಿ ಮಾಡಿಕೊಂಡಿಲ್ಲ ಭ್ರಷ್ಟಾಚಾರದ ವಿರುದ್ಧ ಹೋರಾಟಕ್ಕೆ ಒಂದು ಬಲ ರಚಿಸಿಕೊಳ್ಳಲು ಹಾಗೂ ಹಿಂದುತ್ವ ರಕ್ಷಣೆಗೆ ನಾವು ಈ ನಿರ್ಧಾರ ಕೈಗೊಂಡಿದ್ದೇವೆ, ಎಂದು ಹೇಳಿದ್ದಾರೆ.

ಮಾಹಾರಾಷ್ಟ್ರದ ಮೈತ್ರಿ ಸರ್ಕಾರದಲ್ಲಿ ಶಿವಸೇನೆ ದೊಡ್ಡಣ್ಣ ಇದ್ದಂತೆ. ಎಂದು ಶಿವಸೇನೆ ನಾಯಕ ಸಂಜಯ್ ರಾವತ್ ಹೇಳಿದ್ದರು. ಇದಕ್ಕೆ ಗರಂ ಆಗಿರುವ ಫಡ್ನವೀಸ್ ನಮಗೆ ಬಿಜೆಪಿಯ ಅವಶ್ಯಕತೆ ಇಲ್ಲ ಎಂದಿದ್ದಾರೆ.