ಬೆಂಗಳೂರು(ಮಾ:18): ಲೋಕಸಭಾ ಚುನಾವಣೆಗೆ ಮಂಡ್ಯ ಕ್ಷೇತ್ರದಿಂದ ಕಣಕ್ಕಿಳಿಯಲು ಮುಂದಾಗಿರುವ ಸುಮಲತಾ ಅಂಬರೀಶ್ ಅವರಿಗೆ ಸ್ಯಾಂಡಲ್ ವುಡ್ ನ ಖ್ಯಾತ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಅವರು ಇಂದು ಬಹಿರಂಗವಾಗಿಯೇ ಬೆಂಬಲ ಸೂಚಿಸಿದ್ದಾರೆ. ಇಂದು ಅವರೊಂದಿಗೆ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡಿದ್ದಾರೆ.

ಇವರ ಜೊತೆಗೆ ಖ್ಯಾತ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಹಿರಿಯ ನಟ ದೊಡ್ಡಣ್ಣ, ಸುಮಲತಾ ಅಂಬರೀಶ್ ಅವರ ಪುತ್ರ ಅಭಿಷೇಕ್ ಮೊದಲಾದವರು ಭಾಗವಹಿಸಿದ್ದು, ಈ ಮೂಲಕ ಲೋಕಸಭಾ ಚುನಾವಣೆಯಲ್ಲಿ ಚಿತ್ರರಂಗದ ಬಹುತೇಕರ ಬೆಂಬಲ ಸುಮಲತಾ ಅವರಿಗಿರುವುದು ಖಚಿತವಾಗಿದೆ.