ಬೆಂಗಳೂರು(ಮಾ:16): ಹಿರಿಯ ನಾಯಕ ಎಸ್.ಎಂ ಕೃಷ್ಣ ಅವರ ಬಗ್ಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಟ್ವಿಟ್ಟರ್ ನಲ್ಲಿ ವ್ಯಂಗ್ಯವಾಗಿ ಮಾತನಾಡಿರುವ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಿರಿಯರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ ಕೃಷ್ಣ ಅವರ ಬಗ್ಗೆ ಕುಮಾರಸ್ವಾಮಿ ಅವರು ಅಧಿಕಾರದ ಮದದಿಂದ ಟೀಕೆ ಮಾಡುವುದು ಮುಖ್ಯಮಂತ್ರಿ ಸ್ಥಾನಕ್ಕೆ ಶೋಭೆ ತರುವುದಿಲ್ಲ,ರಾಜಕೀಯ ಅನುಭವದಲ್ಲಿ ಎಸ್.ಎಂ ಕೃಷ್ಣ ಅವರಿಗೂ ಕುಮಾರಸ್ವಾಮಿ ಅವರಿಗೂ ಹೋಲಿಸಲು ಸಾಧ್ಯವೇ ಇಲ್ಲ,ಕುಮಾರಸ್ವಾಮಿ ಅವರಿಗೆ ವಿನಾಶ ಕಾಲೇ ವಿಪರೀತ ಬುದ್ಧಿ ಎಂಬಂತಾಗಿದೆ ಎಂದಿದ್ದಾರೆ.

ಮಂಡ್ಯ ಕ್ಷೇತ್ರದಲ್ಲಿ ತನ್ನ ಮಗನನ್ನು ಗೆಲ್ಲಿಸಲು ಸಾಧ್ಯವಿಲ್ಲ ಎಂಬುದು ಅರ್ಥವಾದ ಬಳಿಕ ಅವರು ತೀವ್ರ ಹತಾಶೆಗೊಂಡಿದ್ದಾರೆ,ಮಂಡ್ಯದ ಜನತೆ ಅವರ ಅಹಂಕಾರಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.